9:28 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಬ್ಯಾಂಕ್ ಆಫ್ ಬರೋಡಾದಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

16/08/2024, 17:15

ಮಂಗಳೂರು(reporterkarnataka.com): ಬ್ಯಾಂಕ್ ಆಫ್ ಬರೋಡಾವು ತನ್ನ ಮಂಗಳೂರಿನ ವೀರಾಜ್ ಟವರ್ಸ್‌ನಲ್ಲಿರುವ ವಲಯ ಕಚೇರಿಯ ಆವರಣದಲ್ಲಿ 78ನೇ ಸ್ವಾತಂತ್ರ್ಯ ದಿನವನ್ನು ಉತ್ಸಾಹ ಮತ್ತು ಭಕ್ತಿಯಿಂದ ಆಚರಿಸಿತು. ವಲಯ ಮುಖ್ಯಸ್ಥರಾದ ರಾಜೇಶ್ ಖನ್ನಾ ಅವರು ರಾಷ್ಟ್ರಧ್ವಜಾರೋಹಣ ನಡೆಸಿ, ಬ್ಯಾಂಕರ್‌ಗಳಾಗಿ ದೇಶ ಸೇವೆಗೆ ಮತ್ತು ಸುರಕ್ಷಿತ ಭವಿಷ್ಯ ನಿರ್ಮಾಣಕ್ಕೆ ಸಂಕಲ್ಪ ಮಾಡಿಕೊಳ್ಳುವಂತೆ ಸಿಬ್ಬಂದಿಗೆ ಪ್ರೇರೇಪಿಸಿದರು.

ರಮೇಶ್ ಕಾನಡೆ, ಡಿಜಿಎಂ ಅಶ್ವಿನಿ ಕುಮಾರ್, ಡಿಜಿಎಂ ಸನೀಲ್ ಕುಮಾರ್, ಮಂಗಳೂರು ನಗರದ ಪ್ರಾದೇಶಿಕ ವ್ಯವಸ್ಥಾಪಕರು ಹಾಗೂ ಹಿರಿಯ ಅಧಿಕಾರಿಗಳು, ಅಧಿಕಾರಿಗಳು ಮತ್ತು ಮಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳು ಸ್ವಾತಂತ್ರ್ಯದ ಭಾವನೆಯನ್ನು ಪ್ರತಿಬಿಂಬಿಸುವ ಬಣ್ಣದ ಉಡುಗೆಗಳಲ್ಲಿ ಭಾಗವಹಿಸಿದರು. ಸುರಕ್ಷತಾ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಅಧಿಕಾರಿಗಳು, ಸ್ವಾತಂತ್ರ್ಯ ಹೋರಾಟಗಾರರು, ಸೈನಿಕರು ಮತ್ತು ಸುರಕ್ಷತಾ ಸಿಬ್ಬಂದಿಯ ನಿಸ್ವಾರ್ಥ ತ್ಯಾಗವನ್ನು ಸ್ಮರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು