10:07 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ: ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

20/01/2026, 18:41

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಡಂತ್ಯಾರು ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ.) ಮಡವು, ಜೆಸಿಐ ಮಡಂತ್ಯಾರು, ಹೈಸ್ಕೂಲ್ ರಿಯೂನಿಯನ್ ಮಡಂತ್ಯಾರು ಹಾಗೂ ರೋಟರಿ ಕ್ಲಬ್ ಮಡಂತ್ಯಾರು ಇವರ ಜಂಟಿ ಸಹಯೋಗದೊಂದಿಗೆ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆಯ ನುರಿತ ವೈದ್ಯರ ತಂಡದಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವು
ಮಡಂತ್ಯಾರಿನ ಶ್ರೀ ದುರ್ಗಾ ಕಾಂಪ್ಲೆಕ್ಸ್ ನ ಕಲಾ (ಆಶೀರ್ವಾದ್) ಸಭಾಂಗಣದಲ್ಲಿ ಜರುಗಿತು.
ಈ ಕಾರ್ಯಕ್ರಮವನ್ನು ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷ ಮ್ಯಾಕ್ಸಿಮ್ ಅಲ್ಬುಕರ್ಕ್ ಅವರು ಉದ್ಘಾಟಿಸಿ ಮಾತನಾಡಿ, “ಕಣ್ಣಿನ ಹಾಗೂ ದಂತದ ಪರೀಕ್ಷೆ ಕಾಲ ಕಾಲಕ್ಕೆ ಮಾಡುವುದು ಅತ್ಯಗತ್ಯ. ಇನ್ನು ಮುಂದೆಯೂ ನಿರಂತರವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇಂತಹ ಕಾರ್ಯಕ್ರಮಗಳನ್ನು ನಡೆಸಲಿ, ಸಾರ್ವಜನಿಕರಿಗೂ ಇದರ ಉಪಯೋಗವಾಗಲಿ ಎಂದು ಹೇಳಿದರು.

ಮಡಂತ್ಯಾರು ಜೆಸಿಐ ಅಧ್ಯಕ್ಷರಾದ ಶ್ರೀಮತಿ ಸಾಯಿಸುಮಾ ಎಂ. ಅವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ನಮ್ಮೂರ ಜನರ ಆರೋಗ್ಯದ ಸಮಸ್ಯೆಗಳಿಗೆ ಹತ್ತಿರದಲ್ಲೇ ಪರಿಹಾರ ಸಿಗಬೇಕೆನ್ನುವ ಉದ್ದೇಶದಲ್ಲಿ ಇಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ” ಎಂದು ಈ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ಪಿ.ಆರ್.ಒ ಭರತ್ ಕುಮಾರ್ ರವರು ಶಿಬಿರದಲ್ಲಿ ಲಭ್ಯವಿರುವ ದಂತ ವೈದ್ಯಕೀಯ ಸೇವೆಗಳಾದ ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು ಹಾಗೂ ಶುಚಿಗೊಳಿಸುವುದು, ರೋಗಗ್ರಸ್ತ ಹಲ್ಲುಗಳನ್ನು ಕೀಳುವುದರ ಬಗ್ಗೆ ಮಾಹಿತಿ ನೀಡಿದರು.
ಅಧ್ಯಕ್ಷತೆಯನ್ನು ವಹಿಸಿದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ, ಜನರ ಆರೋಗ್ಯದ ದೃಷ್ಟಿಯಿಂದ ಶಾಖೆಗಳ ವಾರ್ಶಿಕೋತ್ಸವದಂದು ಉಚಿತ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುತ್ತಿದೆ. ನಮ್ಮ ಆರೋಗ್ಯದ ಬಗ್ಗೆ ಮುಂಜಾಗೃತ ವಹಿಸಿದರೆ ನಮ್ಮ ಆರೋಗ್ಯ ಒಳ್ಳೆಯ ರೀತಿಯಲ್ಲಿರುತ್ತದೆ. ಮುಂದಿನ ದಿನಗಳಲ್ಲಿ ಇನ್ನೂ ಇಂತಹ ಶಿಬಿರಗಳನ್ನು ನಿರಂತರವಾಗಿ ಆಯೋಜಿಸಲು ಸಹಕಾರವನ್ನು ಕೋರಿದರು. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಸಮುದಾಯ ದಂತ ಆರೋಗ್ಯ ವಿಭಾಗ ದೇರಳಕಟ್ಟೆಯ ಆಡಳಿತ ವರ್ಗ, ವೈದ್ಯರು, ಸಿಬ್ಬಂದಿ ವರ್ಗ, ಕೈ ಜೋಡಿಸಿದ ಎಲ್ಲಾ ಸಂಘ ಸಂಸ್ಥೆಗಳಿಗೆ, ಕಾರ್ಯಕ್ರಮವನ್ನು ನಡೆಸಲು ಸ್ಥಳಾವಕಾಶವನ್ನು ನೀಡಿರುವ ದುರ್ಗಾ ಕಾಂಪ್ಲೆಕ್ಸ್ ಮಾಲಿಕರಾದ ಶ್ರೀ ಎಂ. ತಿಮ್ಮಪ್ಪ ಗೌಡ ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ನತೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಗೋಪಾಲ್ ಎಂ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಯೆನಪೋಯ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯರಾದ ಡಾ.ಮಿಫ್ರ, ಡಾ. ಖಾಲಿದ್, ಡಾ. ಗಿರಿಧರ್, ಹೈಸ್ಕೂಲ್ ರಿಯೂನಿಯನ್ ಮಡಂತ್ಯಾರು ಇದರ ಕಾರ್ಯದರ್ಶಿಯಾದ ಶ್ರೀ ಸಂಪತ್ ಕುಮಾರ್ ಹಾಗೂ ಕಲಾ ಸಭಾಂಗಣ ಶ್ರೀ ದುರ್ಗಾ ಕಾಂಪ್ಲೆಕ್ಸ್ ಮಾಲಿಕರಾದ ಶ್ರೀ ಎಮ್ ತಿಮ್ಮಪ್ಪ ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು ೧೪೦ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ, ದಂತ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಹಾಗೂ ಉಚಿತ ಔಷಧಿ ವಿತರಣೆಯನ್ನು ನಡೆಸಲಾಯಿತು ಹಾಗೂ ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಯನ್ನು ಮಾಡಲಾಯಿತು.
ಈ ಕಾರ್ಯಕ್ರಮವನ್ನು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖಾಧಿಕಾರಿ ಶ್ರೀಮತಿ ಧನಲಕ್ಷ್ಮೀ ಯವರು ಸ್ವಾಗತಿಸಿ, ಪ್ರಭಾರ ಶಾಖಾಧಿಕಾರಿ ಕುಮಾರಿ ಪ್ರಜ್ಞಾ ಯವರು ವಂದಿಸಿದರು, ಶಾಖೆಯ ಸಿಬ್ಬಂದಿಯಾದ ಕುಮಾರಿ ಹರ್ಷಿತಾ ರವರು ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು