6:15 PM Saturday26 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಮೈಸೂರು ವಿಶ್ವವಿದ್ಯಾಲಯ: ಅಂಕಪಟ್ಟಿಗಾಗಿ ವಿದ್ಯಾರ್ಥಿನಿ ಹೋರಾಟ; ರಸ್ತೆಯಲ್ಲಿ ಮಲಗಿ ಪ್ರತಿಭಟನೆ

06/11/2025, 11:00

‘ನಕಲು ಅಂಕಪಟ್ಟಿ ಪಡೆಯಲು ₹18 ಸಾವಿರ ಹಣ ಕೇಳುತ್ತಿದ್ದಾರೆ’ ಎಂದು ಆರೋಪಿಸಿ ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಡಿ.ಸಿ.ಪ್ರಭಾ ಕಾಫರ್ಡ್‌ ಭವನದ ಮುಂಭಾಗದ ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
‘ನಾನು ಬಿ.ಇಡಿ ಪ್ರವೇಶ ಪಡೆಯಲು ಬಯಸಿದ್ದೆ. ಅದಕ್ಕಾಗಿ ವಿಶ್ವವಿದ್ಯಾಲಯದಲ್ಲೇ ಉಳಿದಿರುವ ನನ್ನ ಎಸ್ಸೆಸ್ಸೆಲ್ಸಿ ಹಾಗೂ ಪದವಿ ಅಂಕಪಟ್ಟಿ ನೀಡುವಂತೆ ವಿನಂತಿ ಮಾಡಿದ್ದೆ. ಆದರೆ, ಬಾಕಿ ಶುಲ್ಕ ಪಾವತಿಸಿದರೆ ಅಂಕಪಟ್ಟಿ ನೀಡುವಾಗಿ ತಿಳಿಸಿದರು. ನಾನು ಈಗಾಗಲೇ ಬಾಕಿ ಶುಲ್ಕವನ್ನು ಪಾವತಿಸಿದ್ದೇನೆ ಎಂದು ಅದರ ರಸೀದಿ ತೋರಿಸಲು ಸಿದ್ಧಳಿದ್ದರೂ ಅದನ್ನು ಪರಿಶೀಲಿಸಲಿಲ್ಲ. ಅದಕ್ಕಾಗಿ ಪ್ರತಿಭಟನೆ ನಡೆಸಬೇಕಾಯಿತು’ ಎಂದು ವಿದ್ಯಾರ್ಥಿನಿ ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸರು ವಿದ್ಯಾರ್ಥಿನಿಯನ್ನು ಕರೆದುಕೊಂಡು ವಿವಿಯಲ್ಲಿ ವಿಚಾರಿಸಿ ಮಾಹಿತಿ ಪಡೆದಿದ್ದಾರೆ.
‘ವಿದ್ಯಾರ್ಥಿನಿ 2021ರಲ್ಲೇ ಮಾನಸಗಂಗೋತ್ರಿಯಲ್ಲಿ ರಾಜ್ಯಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಆದರೆ, ಅನಾರೋಗ್ಯದ ಕಾರಣ ದ್ವಿತೀಯ ವರ್ಷದ ಪ್ರವೇಶ ಶುಲ್ಕವನ್ನು ನಿಧಾನವಾಗಿ ಪಾವತಿಸುತ್ತೇನೆ ಎಂದು ತಿಳಿಸಿದ್ದರು. ಹಾಗಾಗಿ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗಿತ್ತು ಅಲ್ಲದೆ, ಅವರ ಖಾತೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನವು ಜಮೆಯಾಗಿದೆ. ಆ ಹಣದಲ್ಲಿಯೂ ಬಾಕಿ ಪಾವತಿಸಿಲ್ಲ. ಮೂರು ವರ್ಷದ ನಂತರ ಇದೀಗ ಬಂದು ಅಂಕಪಟ್ಟಿ ಕೇಳುತ್ತಿದ್ದಾರೆ. ಬಾಕಿ ಶುಲ್ಕ ಪಾವತಿಸಿದರೆ ಮಾತ್ರ ಅಂಕಪಟ್ಟಿ ನೀಡುವುದಾಗಿ ವಿಭಾಗದವರು ತಿಳಿಸಿದ್ದಾರೆ. ಅದಕ್ಕೆ ಕೋಪಗೊಂಡು ವಿದ್ಯಾರ್ಥಿನಿ ಪ್ರತಿಭಟನೆ ನಡೆಸಿದ್ದಾರೆ’ ಎನ್ನಲಾಗಿದೆ.

ಗಿರಿಧರ್ ಕೊಂಪುಳಿರ ಮೈಸೂರು
info.reporterkarnataka@gmail.com

ಇತ್ತೀಚಿನ ಸುದ್ದಿ

ಜಾಹೀರಾತು