7:40 AM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ರೋಹನ್ ಕಾರ್ಪೋರೇಷನ್ ಕನಸಿನ ಕಟ್ಟಡದೊಂದಿಗೆ ಕನಸಿನ ಭಾರತ ನಿರ್ಮಾಣ

16/08/2024, 11:41

ಮಂಗಳೂರು(reporterkarnataka.com): 78ನೇ ಸ್ವಾತಂತ್ರ ದಿನವನ್ನು ರೋಹನ್ ಕಾರ್ಪೋರೇಷನ್ ಆವರಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಕಾರ್ಮಿಕ ಅಧಿಕಾರಿ ವಿಲ್ಮಾ “ಕನಸಿನ ಕಟ್ಟಡದ ರೋಹನ್ ಕಾರ್ಪೊರೇಷನ್ ಜೊತೆ ಸೇರಿ ಹೊಸ ಭಾರತ ನಿರ್ಮಾಣ ಮಾಡೋಣ, ಕಾರ್ಮಿಕರಿಲ್ಲದೆ ನಮಗೆ ಸೂರಿಲ್ಲ. ನಿಮ್ಮ ನಡುವಿನ ಸ್ವಾತಂತ್ರೋತ್ಸವ ನಿಜಕ್ಕೂ ನೆನಪಿನ ಬುತ್ತಿ’, ಎಂದರು.


ಸ್ವಾತಂತ್ರೋತ್ಸವದ ಕುರಿತಾಗಿ ಮಾತನಾಡಿದ ಕಾರ್ಮಿಕ ಅಧಿಕಾರಿ ಕುಮಾರ್ “ಕಾರ್ಮಿಕರಿಗೆ ಇಂದು ರಜೆ ಘೋಷಣೆ ಮಾಡಿದ್ದೇವೆ, ಸ್ವಾತಂತ್ರಕ್ಕಾಗಿ ಮುಡಿಪಿರುವ ಈ ದಿನವನ್ನು ಕಾರ್ಮಿಕರು ಸ್ವತಂತ್ರವಾಗಿ ಆಚರಿಸಿ” ಎಂದು ಹೇಳಿದರು.
ರೋಹನ್ ಕಾರ್ಪೊರೇಶನ್‌ನ ದೈನಂದಿನ ಕಾರ್ಯಗಳಲ್ಲಿ ಒಗ್ಗಟ್ಟಿನ ಮೌಲ್ಯಗಳನ್ನು ಸಾಕಾರಗೊಳಿಸಿ, ವಿವಿಧತೆಯಲ್ಲಿನ ಏಕತೆಯನ್ನು ಗೌರವಿಸಿ ಪ್ರಗತಿಯತ್ತ ನಿರಂತರವಾಗಿ ಕೆಲಸ ಸಾಗಲಿ. ನಮ್ಮ ದೇಶವನ್ನು ಮತ್ತು ಸಂಸ್ಥೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತೇವೆ ಎಂದು ಪ್ರತಿಜ್ಞೆ ಮಾಡಿ. ಮುಂದಿನ ಪೀಳಿಗೆಗಳು ಹೆಮ್ಮೆಪಡುವಂತಹ ಭವಿಷ್ಯವನ್ನು ರಚಿಸುವಲ್ಲಿ ಒಂದಾಗೋಣ. ಎಂಬ ಆಶಯದೊಂದಿಗೆ ರೋಹನ್ ಕಾರ್ಪೊರೇಷನ್ ಕಾರ್ಯಕ್ರಮ ಯಶಸ್ವಿ ಕಂಡಿತು.
ಕಾರ್ಯಕ್ರಮದಲ್ಲಿ ರೋಹನ್ ಕಾರ್ಪೊರೇಷನ್ ನ ಸದಸ್ಯರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು