10:49 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಂಸದ ಬಿ. ವೈ ರಾಘವೇಂದ್ರ ಜನ್ಮದಿನ: ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

16/08/2024, 22:28

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರ ಜನ್ಮದಿನದ ಪ್ರಯುಕ್ತ ತೀರ್ಥಹಳ್ಳಿ ಬಿಜೆಪಿ ಯುವ ಮೋರ್ಚಾ ವತಿಯಿಂದ ತಾಲೂಕು ಜಯಚಾಮರಾಜೇಂದ್ರ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಮತ್ತು ಹಂಪಲು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಕುಕ್ಕೆ ಪ್ರಶಾಂತ್, ಬಿ. ವೈ. ರಾಘವೇಂದ್ರರವರು ಯುವ ಮುಖಂಡರಾಗಿ ಸಂಘಟನೆ ಮತ್ತು ಕೆಲಸದಲ್ಲಿ ರಾಜ್ಯಕ್ಕೆ
ಮಾದರಿಯಾಗಿರುವ ನಾಯಕ, ಅವರ ಜನ್ಮದಿನದ ಪ್ರಯುಕ್ತ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಾಗೂ ಹಂಪಲು ವಿತರಣೆ ಮಾಡುತ್ತಿದ್ದೇವೆ. ಅವರು ತಮ್ಮ ಕೆಲಸಗಳ ಮೂಲಕ ರಾಜ್ಯಾದ್ಯಂತ ಮನೆ ಮಾತಾಗಿದ್ದಾರೆ. ಇನ್ನಷ್ಟು ಕೆಲಸ ಮಾಡುವ ಶಕ್ತಿ ಭಗವಂತ ನೀಡಲಿ ಎಂದು ಹಾರೈಸಿದರು.


ತಾಲೂಕು ಮಂಡಲ ಬಿಜೆಪಿ ಅಧ್ಯಕ್ಷರಾದ ನವೀನ್ ಹೆದ್ದೂರ್ ಮಾತನಾಡಿ ಸಂಸದರ ಜನ್ಮದಿನದ ಪ್ರಯುಕ್ತ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುತ್ತಿದ್ದೇವೆ. ಸಂಸದರು ನಮ್ಮ ಕ್ಷೇತ್ರಕ್ಕೆ, ತಾಲೂಕಿಗೆ ಮಾತ್ರವಲ್ಲದೆ ಜಿಲ್ಲೆಗೆ ಆಸ್ತಿ ಇದ್ದಂತೆ. ಅವರ ಜನ್ಮದಿನ ವಿಶೇಷವಾಗಿರಲಿ ಎಂಬ ಕಾರಣದಿಂದ ಹೀಗೆ ಮಾಡುತ್ತಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಮಧುರಾಜ್ ಹೆಗ್ಡೆ, ಚಂದವಳ್ಳಿ ಸೋಮಶೇಖರ್, ರಕ್ಷಿತ್ ಮೇಗರವಳ್ಳಿ,
ವಿನುತ್ ಗೌಡ, ಪ್ರಮೋದ್ ಪಮ್ಮ, ಅನೂಪ್ ಉಪಾಧ್ಯ ಸೇರಿದಂತೆ ಹಲವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು