1:58 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಹಿರಿಯ ಸಾಹಿತಿ, ಸಂಶೋಧಕ ಚಂದ್ರಕಾಂತ ಬಿಜ್ಜರಗಿಗೆ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ: ನಾಳೆ ಮುಖ್ಯಮಂತ್ರಿ ಪ್ರದಾನ

07/11/2025, 08:59

ಬೆಂಗಳೂರು(reporterkarnataka.com): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪ್ರತಿ ವರ್ಷ ನೀಡಲಾಗುವ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ವಿಜಯಪುರದ ಹಿರಿಯ ಸಾಹಿತಿ, ಸಂಶೋಧಕ ಶ್ರೀ ಚಂದ್ರಕಾಂತ ಬಿಜ್ಜರಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಚಂದ್ರಕಾಂತ ಬಿಜ್ಜರಗಿ ಅವರು ದರ್ಪಣ ವಾರಪತ್ರಿಕೆಯ ಸಂಪಾದಕರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ. ಇವರು ಹಾಲುಮತ ಸನಾತನ ಧರ್ಮ, ಕುರುಬರ ಕುಲ ಪುತ್ರ ಚಂದ್ರಗುಪ್ತ ಮೌರ್ಯ , ದಾರ್ಶನಿಕ ಕವಿ ಕನಕದಾಸ ಸೇರಿದಂತೆ ಅನೇಕ ಕೃತಿಗಳನ್ನು ರಚಿಸಿದ್ದಾರೆ, ಇವರ ಅನೇಕ ಸಂಶೋಧನಾ ಲೇಖನಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.
ಡಾ. ಕೆ.ಮರುಳಸಿದ್ದಪ್ಪ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿ ಚಂದ್ರಕಾಂತ ಬಿಜ್ಜರಗಿ ಅವರನ್ನು ಆಯ್ಕೆ ಮಾಡಿದೆ ಎಂದು ಅವರು ತಿಳಿಸಿದ್ದಾರೆ.
ಶನಿವಾರ ದಿನಾಂಕ 8.11.2025 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಸಂತ ಶ್ರೇಷ್ಠ ಕನಕದಾಸ ಜಯಂತಿ ಆಚರಣೆ ಸಂದರ್ಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರು ಪ್ರದಾನ ಮಾಡಲಿದ್ದಾರೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಈ ಪ್ರಶಸ್ತಿ 5 ಲಕ್ಷ ರೂಪಾಯಿ ನಗದು, ಕನಕದಾಸರ ಪುತ್ಥಳಿ ಹಾಗೂ ಪ್ರಶಸ್ತಿ ಫಲಕ ,ಫಲತಾಂಬೂಲ ಒಳಗೊಂಡಿದೆ .

ಇತ್ತೀಚಿನ ಸುದ್ದಿ

ಜಾಹೀರಾತು